ಸೋಮವಾರ, ಸೆಪ್ಟೆಂಬರ್ 28, 2020
25 °C

ಹುಬ್ಬಳ್ಳಿ: ಲಾರಿ, ಕಾರು ಡಿಕ್ಕಿ; ಓರ್ವ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ಲಾರಿ ಮತ್ತು ಕಾರು ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ.  ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್ ( 35 ) ಎಂದು ಗುರುತಿಸಲಾಗಿದೆ.
 
ಅಪಘಾತ ನಡೆದ ಸ್ಥಳದಲ್ಲಿದ್ದ ಜನ ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ . ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಸೇಲಂನಿಂದ ಮುಂಬೈಗೆ ತೆರಳುತ್ತಿದ್ದರು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು