ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲೆಕ್ಸ್ ಭರಾಟೆ: ಅಪಹಾಸ್ಯಕ್ಕೀಡಾದ ಹುಬ್ಬಳ್ಳಿ ಧಾರವಾಡ ಬಿಜೆಪಿ ನಾಯಕರು

Last Updated 26 ಸೆಪ್ಟೆಂಬರ್ 2022, 5:08 IST
ಅಕ್ಷರ ಗಾತ್ರ

ಧಾರವಾಡ: ಪ್ರತಿಭಾದೇವಿಸಿಂಗ್ ಪಾಟೀಲ ಅವರು ದೇಶದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಆದರೆ, ಶಾಸಕ ಅರವಿಂದ ಬೆಲ್ಲದ, ಸಂಸದ ಪ್ರಹ್ಲಾದ ಜೋಶಿಸ್ವಾಗತ ಕೋರುವ ಬ್ಯಾನರ್‌ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬಿಂಬಿಸಿದ್ದು, ಅಪಹಾಸ್ಯಕ್ಕೀಡಾಗಿದ್ದಾರೆ.

ಸೆ.26ರಂದು ನಡೆಯಲಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಕೋರುವ ಬ್ಯಾನರ್‌ಗಳನ್ನು ನಗರದಲ್ಲಿ ಹಾಕಲಾಗಿದ್ದು, ಅದರಲ್ಲಿ ರಾಷ್ಟ್ರದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆಯಲಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಶಾಸಕ ಅರವಿಂದ ಬೆಲ್ಲದ ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲವೇ? ಎಂಬ ಚರ್ಚೆಗಳು ನಡೆಯಿತ್ತಿವೆ.

‘ದ್ರೌಪದಿ ಮುರ್ಮು ಅವರು ರಾಷ್ಟ್ರದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಮೊದಲಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್ ನಲ್ಲಿ ಅಳವಡಿಸಿ ಇತಿಹಾಸ ತಿರುಚುವ ಕೆಲಸಕ್ಕೆ ಮುಂದಾಗಿದ್ದನ್ನು ನೋಡಿದರೆ, ಅರವಿಂದ ಬೆಲ್ಲದ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿರುವ ಸಂದೇಹ ಬರುತ್ತಿದೆ’ ಎಂದು ಎನ್.ಎಸ್.ಯು.ಐ ಮಾಜಿ ರಾಜ್ಯ ಕಾರ್ಯದರ್ಶಿ ಮಹಾಂತೇಶ ಕಂಬಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT