ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವೈಫಲ್ಯ: ಕೋನರಡ್ಡಿ ರಾಜೀನಾಮೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
2013ನೇ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ 9 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಒಂದು ಸ್ಥಾನವಷ್ಟೇ ಪಡೆದಿದೆ.
ತಮ್ಮ ರಾಜೀನಾಮೆ ಕುರಿತು ಕೋನರಡ್ಡಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ಕಳುಹಿಸಿದ್ದಾರೆ.
ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ, ಸರ್ಕಾರದ ಹಂಗಿನಲ್ಲಿದ್ದುಕೊಂಡೇ ಕೆಲಸ ಮಾಡುತ್ತಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಇದನ್ನೂ ಓದಿ– ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಬಿಜೆಪಿಗೆ ಅಲ್ಪತೃಪ್ತಿ, ಕಾಂಗ್ರೆಸ್‌ಗೆ ಹಿನ್ನಡೆ
ಪಕ್ಷದ ಕಾರ್ಯಕರ್ತರು ಸಾಕಷ್ಟು ಪ್ರಚಾರ ಮಾಡಿದರೂ, ಸಂಘಟನೆ ಕೈಗೊಂಡರೂ ಮತದಾರರು ನಮಗೆ ಮತ ಹಾಕಿಲ್ಲ. ಚುನಾವಣೆಯ ವೈಫಲ್ಯದ ಹೊಣೆ ನಾನೇ ಹೊರುವೆ ಎಂದರು.
ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮ ಪಟ್ಟರೂ ಫಲ ಲಭಿಸಲಿಲ್ಲ ಎನ್ನುವ ನೋವು ಕಾಡುತ್ತಿದೆ. ಜವಾಬ್ದಾರಿ ಕಡಿಮೆ ಮಾಡಿಕೊಂಡು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ನನ್ನ ರಾಜೀನಾಮೆಯನ್ನು ಪಕ್ಷದ ವರಿಷ್ಠರು ಒಪ್ಫಿಕೊಳ್ಳಬೇಕು. ಕಲಬುರ್ಗಿ ಪಾಲಿಕೆಯಲ್ಲಿ ಯಾರ ಜೊತೆ ಕೈ ಜೋಡಿಸಬೇಕು ಎನ್ನುವುದರ ಬಗ್ಗೆ ಒಂದೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.