ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 28ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

Last Updated 20 ಮೇ 2022, 6:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 21ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೇ‌28ರಂದು ಚುನಾವಣೆ ನಡೆಯಲಿದೆ. ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಚುನಾವಣಾ ಅಧಿಕಾರಿಗಯಾಗಿರಲಿದ್ದಾರೆ.

ಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ. ಹುಬ್ಬಳ್ಳಿಯಲ್ಲಿರುವ ಪಾಲಿಕೆಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.

ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ಮತ್ತು ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮೇಯರ್ ಹಾಗೂ ಉಪ ಮೇಯರ್ ಅವರನ್ನು ಚುನಾಯಿಸಲಾಗುವುದು ಎಂದು ಪಾಲಿಕೆಯ ಆಯುಕ್ತ ಡಾ.ಬಿ.‌ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT