ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ಆರಂಭ

Published 20 ಜೂನ್ 2023, 4:40 IST
Last Updated 20 ಜೂನ್ 2023, 4:40 IST
ಅಕ್ಷರ ಗಾತ್ರ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.

ಬೆಳ್ಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ವೀಣಾ ಭರದ್ವಾಡ, ಉಪಮೇಯರ್ ಸ್ಥಾನಕ್ಕೆ ಸತೀಶ್ ಹಾನಗಲ್ ನಾಮಪತ್ರ ಸಲ್ಲಿಸಲು ತೆರಳಿದರು.

ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಸುವರ್ಣಾ ಕ್ಳಳಕುಂಡ್ಲಾ ಹಾಗೂ ಉಪ ಮೇಯರ್ ಸ್ಥಾನಕ್ಕೆ ರಾಜು ಕಮತಿ ಅವರು ಉಮೇದುವಾರಿಕೆ ಸಲ್ಲಿಸಲು ತೆರಳಿದರು.

ಮೇಯರ್ ಸ್ಥಾನ: ಸಾಮಾನ್ಯ ಮಹಿಳೆ, ಉಪ ಮೇಯರ್ ಸ್ಥಾನ: ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಯಾಗಿದೆ.

ಬಿಜೆಪಿ: 39, ಕಾಂಗ್ರೆಸ್: 33, ಜೆಡಿಎಸ್: 1, ಎಐಎಂಐಎಂ: 3, ಪಕ್ಷೇತರ: 6 ಒಟ್ಟು 82 ಸದಸ್ಯರು ಇದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ ತಂತ್ರಗಾರಿಕೆಯಲ್ಲಿ ತೊಡಗಿವೆ.

ಪಕ್ಷೇತರ ಸದಸ್ಯರನ್ನು ಸೆಳೆಯುವ ಪ್ರಯತ್ನಗಳು ಬಿರುಸುಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT