ಧಾರವಾಡ: ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅನಿವಾರ್ಯ ಎಂದು ಡಿಸಿಪಿ ರಾಜು ಎಂ. ಹೇಳಿದರು.
ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವ್ಯಸನ ವಿರುದ್ಧ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಮಲಿಗಾಗಿ
ಗಾಂಜಾ, ಕೊಕೇನ್ ಮುಂತಾದ ಮಾದಕ ವಸ್ತುಗಳನ್ನು ಸೇವಿಸುತ್ತಾರೆ. ಇಂಥ ಗೀಳಿನಿಂದಾಗಿ ಎಷ್ಟೋ ಯುವಜನರು ಬದುಕು ಹಾಳು ಮಾಡಿಕೊಂಡಿದ್ದಾರೆ ಎಂದರು.
ಮಾದಕ ಪದಾರ್ಥಗಳ ಸೇವನೆಯು ಶರೀರ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ಮಾದಕ ವ್ಯಸನವು ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ. ಬಿ. ಎಸಿಪಿ ವಿಜಯ ಕುಮಾರ ಟಿ., ಇನ್ ಸ್ಪೆಕ್ಟರ್ ಶಂಕರಗೌಡ ಬಸವನಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.