ಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ವೇಳೆ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು, ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಬಿರಾಜ ದಯಣ್ಣವರ (59) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.