ಹುಬ್ಬಳ್ಳಿ: ಇಲ್ಲಿನ ಸಿದ್ಧೇಶ್ವರ ಪಾರ್ಕ್ನಲ್ಲಿರುವ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃವಾಗಿ ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್ಗಳನ್ನು ಪತ್ತೆಹಚ್ಚಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್ ಸಹ ಮಾಲೀಕ ಸತೀಶ ಬಂಡಿ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ದಾಖಲಿಸಿದ್ದಾರೆ.

‘ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲ ಸಿಲಿಂಡರ್ಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿತ್ತು. ಎಲ್ಲಿಂದ ಪೂರೈಕೆ ಆಗಿದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿಜಯಕುಮಾರ ಹೆಗ್ಗಳಗಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.