ಸೋಮವಾರ, ಸೆಪ್ಟೆಂಬರ್ 26, 2022
20 °C
ಮುಂಜಾಗ್ರತಾ ಕ್ರಮವಾಗಿ ವಿವಿಧೆಡೆ ಪೊಲೀಸ್ ಬಂದೋಬಸ್ತ್

ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಹುಬ್ಬಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಹುಬ್ಬಳ್ಳಿ 76ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಜ್ಜಾಗಿದೆ. ಪಾಲಿಕೆ ಕೇಂದ್ರ ಕಚೇರಿಯ ಕಟ್ಟಡ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿದ್ಯುತ್‌ ದೀಪಗಳನ್ನು ಅಳವಡಿಸಿ ಅಲಂಕರಿಸಲಾಗಿದೆ.

ರೈಲ್ವೆ ನಿಲ್ದಾಣದ ಮುಖ್ಯ ಕಟ್ಟಡ, ರೈಲು ಸೌಧ, ಗೋಕುಲ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳ ಕಟ್ಟಡಗಳನ್ನೂ ಕೇಸರಿ, ಬಿಳಿ, ಹಸಿರು ದೀಪಗಳಿಂದ ಸಿಂಗರಿಸಲಾಗಿದೆ. ಈದ್ಗಾ ಮೈದಾನವನ್ನು ಶುಚಿಗೊಳಿಸಿ, ಧ್ವಜಾರೋಹಣಕ್ಕೆ ಅಣಿಗೊಳಿಸಲಾಗಿದೆ.

ನಗರದಲ್ಲಿರುವ ಮಹಾಪುರುಷರ ಮೂರ್ತಿ ಹಾಗೂ ಪುತ್ಥಳಿಗಳನ್ನು ಶುಚಿಗೊಳಿಸಿ, ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಸರ್ಕಾರಿ ಕಚೇರಿ, ಸಂಘ–ಸಂಸ್ಥೆ, ಶಾಲಾ, ಕಾಲೇಜುಗಳಲ್ಲಿಯೂ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಸಂಘಟನೆಗಳು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿ ನಗರದಲ್ಲಿ ಪಥಸಂಚಲನ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಮುಂಜಾಗ್ರತ ಕ್ರಮವಾಗಿ ಹುಧಾ ಪೊಲೀಸ್‌ ಕಮಿಷನರೇಟ್‌ ಘಟಕದಲ್ಲಿ ಬಿಗಿ ಬಂದೋಬಸ್ತ್‌ ಹಾಕಲಾಗಿದೆ. ರೈಲು ನಿಲ್ದಾಣ, ಬಸ್‌ ನಿಲ್ದಾಣ, ಚನ್ನಮ್ಮ ವೃತ್ತ ಹಾಗೂ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಹಳೇ ಹುಬ್ಬಳ್ಳಿಯ ಕೆಲವು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.