ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: 'ಸಂಗೀತ ವರ್ಷಾ' ಕರೋಕೆ ಕಾರ್ಯಕ್ರಮ ಜೂನ್ 5ಕ್ಕೆ

Last Updated 3 ಜೂನ್ 2022, 6:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಶೋಕ ನಗರದ ಆರಾಧನಾ ಕಲಾ ಕೇಂದ್ರದ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಆದರ್ಶ ನಗರದಲ್ಲಿರುವ ಡಾ.ಜಿ.ವಿ.‌ ಜೋಶಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಸಭಾಂಗಣದಲ್ಲಿ ಜೂನ್ 5ರಂದು ಹಿಂದಿ ಮತ್ತು ಕನ್ನಡ ಚಲನಚಿತ್ರ ಗೀತೆಗಳ "ಸಂಗೀತ ವರ್ಷಾ" ಕರೋಕೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು‌ ಕೇಂದ್ರದ ಅಧ್ಯಕ್ಷ ವೆಂಕಟೇಶ ಅಥಣಿ ಹೇಳಿದರು.

ಮಧ್ಯಾಹ್ನ 2ರಿಂದ ರಾತ್ರಿ 9ರವರೆಗೆ ಕಾರ್ಯಕ್ರಮ ನಡೆಯಲಿದೆ‌. ಸಂಜೆ 5.30ಕ್ಕೆ ಆರಂಭವಾಗಲಿರುವ ಸಭಾ ಕಾರ್ಯಕ್ರಮವನ್ನು ಎನ್.ಎಲ್.ಇ ಸಂಸ್ಥೆಯ ಗೌರವ ಕಾರ್ಯದರ್ಶಿ ರಾಜಾ ದೇಸಾಯಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಉಪಾಧ್ಯಕ್ಷ ಡಾ. ಗೋವಿಂದ ಮಣ್ಣೂರ ಮತ್ತು ಹಿಂದೂಸ್ತಾನಿ ಗಾಯಕ ಬಾಲಚಂದ್ರ ನಾಕೋಡ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಡು, ನೃತ್ಯ, ಮಿಮಿಕ್ರಿ, ಏಕಪಾತ್ರಾಭಿನಯ, ಹಾಸ್ಯ ಚಟಾಕಿ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು 45ಕ್ಕೂ ಹೆಚ್ಚು ಹವ್ಯಾಸಿ ಕಲಾವಿದರು ಪ್ರಸ್ತುತಪಡಿಸಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಕೇಂದ್ರವು ಪ್ರತಿ ಭಾನುವಾರ ಬೆಳಿಗ್ಗೆ ಅಶೋಕ ನಗರದ ಉದ್ಯಾನದಲ್ಲಿ ಮತ್ತು ಸಂಜೆ ಮಯೂರಿ ಎಸ್ಟೇಟ್ ಉದ್ಯಾನದಲ್ಲಿ ಸಂಗೀತ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ ಎಂದರು.

ಕೇಂದ್ರದ ರಾಜು ನರಗುಂದ, ಆನಂದ ಮೋಹನ, ಪ್ರಕಾಶ ಕುಲಕರ್ಣಿ ಹಾಗೂ ಯಲ್ಲಪ್ಪ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT