ಹುಬ್ಬಳ್ಳಿ: ಆನ್ಲೈನ್ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಪಡೆಯಬಹುದು ಎಂದು ಹಳೇ ಗಬ್ಬೂರಿನ ಚಂದ್ರಶೇಖರ ಎಸ್. ಅವರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ ವ್ಯಕ್ತಿ, ₹65.70 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಚಂದ್ರಶೇಖರ ಅವರು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ನೋಡುತ್ತಿದ್ದಾಗ ಹಣ ಹೂಡಿಕೆ ಕುರಿತು ಜಾಹೀರಾತು ವೀಕ್ಷಿಸಿದ್ದ ಅವರು, ಮೊಬೈಲ್ಗೆ ಬಂದ ಲಿಂಕ್ ಒತ್ತಿ ಹಣ ಹೂಡಿಕೆ ಮಾಡಿದ್ದಾರೆ. ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ ವ್ಯಕ್ತಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಸಾವು: ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ರಸ್ತೆಯ ದುರ್ಗಾ ಕಾಲೊನಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೊ ಉರುಳಿದ ಪರಿಣಾಮ, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಕುಸುಗಲ್ ಗ್ರಾಮದ ನಾಗೇಶ ಬಡಿಗೇರ (38) ಮೃತಪಟ್ಟ ವ್ಯಕ್ತಿ. ಎರಡು ದಿನಗಳ ಹಿಂದೆ ಆಟೊ ಉರುಳಿದ್ದು, ತೀವ್ರ ಗಾಯಗೊಂಡಿದ್ದ ನಾಗೇಶ ಅವರನ್ನು ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.