ಮಂಗಳವಾರ, ಜುಲೈ 5, 2022
25 °C

ಹುಬ್ಬಳ್ಳಿ: ಹಾಲು ವಿತರಿಸಲು ತೆರಳಿದ್ದ ಪಾಲಿಕೆ ಅಧಿಕಾರಿಗೆ ಪೊಲೀಸರ ಲಾಠಿ ಏಟು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ ಪಾಲಿಕೆ ಕಚೇರಿ

ಹುಬ್ಬಳ್ಳಿ: ಕರ್ತವ್ಯ ನಿರತ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.

ಬುಧವಾರ ಹಾಲು ವಿತರಣೆ ಕಾರ್ಯದ ಮೇಲೆ ತೆರಳುತ್ತಿದ್ದ ಪಾಲಿಕೆ ಅಧಿಕಾರಿಯನ್ನು ತಡೆದು ಥಳಿಸಿದ್ದಾರೆ. ಹಳೇ ಹುಬ್ಬಳ್ಳಿಯ ಹೆಗ್ಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. 

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ-9ರ ಸಹಾಯಕ ಕಂದಾಯ ಅಧಿಕಾರಿ ಎನ್.ಕೆ. ಅಂಗಡಿ  ಎಂಬುವರೇ ಹಲ್ಲೆಗೊಳಗಾದ ಅಧಿಕಾರಿ. ಪೊಲೀಸರು ಹೊಡೆದಿರುವುದು ನಿಜ. ವಿಷಯವನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಗಮನಕ್ಕೆ ತರಲಾಗಿದೆ ಎಂದು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು