ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ‍ಪ್ರತಿಭಟನೆ

Last Updated 30 ಜುಲೈ 2022, 9:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮಾಜದ ಮುಖಂಡರು ಶನಿವಾರ ಪ್ರತಿಭಟನಾ ಮೆರವಣಿಗೆ‌ ನಡೆಸಿದರು.

ನಗರದ ನೆಹರೂ‌ ಕ್ರೀಡಾಂಗಣದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಚನ್ನಮ್ಮ‌ ಅವರ ಪ್ರತಿಮೆಗೆ ಸ್ವಾಮೀಜಿ ಮಾಲಾರ್ಪಣೆ ಮಾಡಿ, ಧರಣಿ ಕುಳಿತರು.

ಬಸವಜಯ ಮೃತ್ಯುಂಜಯ ಸ್ವಾಮೀಜಿ‌ ಮಾತನಾಡಿ, ಮುಖ್ಯಮಂತ್ರಿ ಸಮಾಜಕ್ಕೆ ನೀಡಿರುವ ಭರವಸೆಯನ್ನು ನೆನಪಿಸಲು ಧರಣಿ ನಡೆಸಲಾಗುತ್ತಿದೆ. ಅವರು ಆಗಸ್ಟ್ 22 ರ ಒಳಗೆ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವ ವಿಶ್ವಾಸ ಇದೆ‌ ಎಂದರು.

ಚನ್ನಮ್ಮ‌ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಳಪಳಿ ನಿರ್ಮಿಸಿದರು. ಇದರಿಂದ ವೃತ್ತದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ‌ ದಟ್ಟಣೆ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT