ಬುಧವಾರ, ಅಕ್ಟೋಬರ್ 28, 2020
29 °C

ಹುಬ್ಬಳ್ಳಿ: ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಆಟೊ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ ₹5ಸಾವಿರ ಪರಿಹಾರ ಇನ್ನೂ ತಲುಪಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಟೊ ರಿಕ್ಷಾ ಮಾಲೀಕರ, ಚಾಲಕರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್'ನಿಂದ ಜೂನ್'ವರೆಗೆ ದುಡಿಮೆಯಿಲ್ಲದೆ ಸಂಕಷ್ಟದ ಪರಿಸ್ಥಿತಿ ಎದುರಿಸಿದ್ದೇವೆ. ಆ ವೇಳೆ ಸರ್ಕಾರ ಪರಿಹಾರವೆಂದು ₹5ಸಾವಿರ ಘೋಷಣೆ ಮಾಡಿತ್ತು. ಸರ್ಕಾರದ ಮಾರ್ಸೂಚಿಯಂತೆ ಅರ್ಜಿ ಸಲ್ಲಿಸಿದ್ದರೂ, ಕೇವಲ ಶೇ 10 ರಷ್ಟು ಮಂದಿಗೆ ಮಾತ್ರ ಪರಿಹಾರ ದೊರಕಿದೆ. ಉಳಿದವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೂ ಏಕಕಾಲದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಒತ್ತಾಯಿಸಿದರು.

ಲೋಕೇಶ ಚಿಕ್ಕಮಂಗಳೂರು, ಮೋದಿನಸಾಬ್ ದೋಣಿ, ದಾವಕಸಾಬ್ ಕುರಹಟ್ಟಿ,  ಮಹಾವೀರ ಬಿಲಾನ, ಗುರು ಬೆಟಗೇರಿ, ಹನುಮಂತ ಮುಳಗುಂಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು