ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Last Updated 3 ಜುಲೈ 2020, 8:03 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಕುಟುಂಗಳಿಗೆ ಮೂರು ತಿಂಗಳವರಗೆ ಪ್ರತಿ ತಿಂಗಳು ₹7,500 ಸಹಾಯ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಗ್ರಹಿಸಿ ಪ್ರತಿಭಟನೆ ನಡೆಸಿತು.

ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಬೇಕು. ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಹೆಚ್ಚಿಸುವುದರೊಂದಿಗೆ 200 ದಿನಗಳಿಗೆ ಕೂಲಿ ನೀಡಬೇಕು. ಲಾಕ್‌ಡೌನ್‌ ಅವಧಿಯ ಸಂಬಳ ಪಾವತಿಸಬೇಕು ಎಂದು ಆಗ್ರಹಿಸಿದರು.

ಖಾಸಗೀಕರಣವನ್ನು ಸಂಪೂರ್ಣವಾಗಿ ಕೈಬಿಡಬೇಕು. ವಿದ್ಯುತ್‌ ತಿದ್ದುಪಡಿ ಮಸೂದೆ ಕೈಬಿಡಬೇಕು. ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಬಾರದು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT