ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಹೆಸರಿಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಜನರ 11 ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಕೆ.ಎಚ್. ಮುನಿಯಪ್ಪ 2009ರಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾಗ ಸಿದ್ಧಾರೂಢರ ಹೆಸರು ನಾಮಕರಣ ಮಾಡಬೇಕು ಎನ್ನುವ ಕೂಗು ಮೊದಲ ಬಾರಿಗೆ ಕೇಳಿಬಂದಿತ್ತು. ಇದಾದ ಬಳಿಕ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದ ರಾಜ್ಯ ಮತ್ತು ಕೇಂದ್ರದ ಜನಪ್ರತಿನಿಧಿಗಳಿಗೆ ಈ ಬೇಡಿಕೆ ಮುಂದಿಟ್ಟು ಭಕ್ತರು ಮತ್ತು ಸಿದ್ಧಾರೂಢ ಸ್ವಾಮಿ ಮಠ ಟ್ರಸ್ಟ್ ಸಮಿತಿ ಸದಸ್ಯರು ನಿರಂತರವಾಗಿ ಮನವಿ ಸಲ್ಲಿಸಿದ್ದರು. ಕೇಂದ್ರ ಗೃಹ ಸಚಿವಾಲಯ, ಹುಬ್ಬಳ್ಳಿ ರೈಲು ನಿಲ್ದಾಣವನ್ನು ‘ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ’ ಎಂದು ಹೆಸರಿಸಲು ತಕರಾರು ಇಲ್ಲ’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೆ.4ರಂದು ಬರೆದ ಪತ್ರದಲ್ಲಿ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.