ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಪ್ರಕರಣ ದಾಖಲು

Published 4 ಮೇ 2024, 0:21 IST
Last Updated 4 ಮೇ 2024, 0:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಧರಿಸಲು ಕಾರಣನಾದ ಆರೋಪದ ಮೇಲೆ ಸದ್ದಾಂ ಹುಸೇನ್‌ ಎಂಬುವನನ್ನು ನವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಪೊಲೀಸರು ಪೋಕ್ಸೊ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಆರೋಪಿಯು ಬಾಲಕಿ ಜೊತೆ ಸ್ನೇಹ ಬೆಳಸಿ, ಅತ್ಯಾಚಾರ ಎಸಗಿದ್ದ. ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ಗುರುವಾರ ರಾತ್ರಿ ಕಿಮ್ಸ್‌ಗೆ ದಾಖಲಿಸಿದ್ದರು. ವೈದ್ಯರು ಮೂತ್ರ ಪರೀಕ್ಷೆ ಮಾಡಿದಾಗ, ಬಾಲಕಿ ಗರ್ಭ ಧರಿಸಿದ್ದು ಗೊತ್ತಾಗಿದೆ. ಆರೋಪಿಯು ಬಾಲಕಿಗೆ ಕರೆ ಮಾಡಿ, ಪಾಲಕರಿಗೆ ತಿಳಿಸಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಎಬಿವಿಪಿ ಸಂಘಟನೆಯ ಕಾರ್ಯಕರ್ತರು ನವನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ‘ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲಾಗದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT