ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಗಾಣಿಗ ನಿಗಮ ಮಂಡಳಿ ಸ್ಥಾಪಿಸಲು ಆಗ್ರಹ

Last Updated 23 ನವೆಂಬರ್ 2020, 7:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಗಾಣಿಗರ ಸರ್ವಾಂಗೀಣ ಅಭಿವೃದ್ಧಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಭಾರತ ಗಾಣಿಗ ಸಂಘದ ಗೌರವಾಧ್ಯಕ್ಷ ಡಾ. ಶೇಖರ ಸಜ್ಜನರ ಆಗ್ರಹಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆ ಇಂದು, ನಿನ್ನೆಯದಲ್ಲ. 1995ರಿಂದಲೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತ ಬಂದಿದ್ದೇವೆ. ಆಡಳಿತಕ್ಕೆ ಬಂದ ಪ್ರತಿಯೊಂದು ಸರ್ಕಾರಕ್ಕೂ ನಾವು ಮನವಿ ಸಲ್ಲಿಸಿದ್ದೇವೆ. ಈವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಎಂದರು.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಾಣಿಗ ಸಮಾಜದ ಸುಮಾರು 50 ಲಕ್ಷ ಮಂದಿ ಇದ್ದಾರೆ. ಅವರಲ್ಲಿ ಬಹುತೇಕರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗೆ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪಿ.ಎಂ. ತಟ್ಟಿಮನಿ, ಅಂದಾನಪ್ಪ ಸಜ್ಜನರ, ಬಾಬುಗೌಡ ಬಿರಾದಾರ, ಶಿವಾನಂದ ತಿರುಕಪ್ಪನವರ, ಸೂರ್ಯಕಾಂತ ಇಟ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT