ಶುಕ್ರವಾರ, ಮೇ 27, 2022
27 °C

ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯಲ್ಲಿ ಏ. 16ರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬಂಧಿಸಿರುವ 89 ಆರೋಪಿಗಳನ್ನು, ಹುಬ್ಬಳ್ಳಿಯ ಕೋರ್ಟ್‌ಗೆ ಸೋಮವಾರ ಹಾಜರುಪಡಿಸಿದ್ದಾರೆ‌.

ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ ಯುವಕನ ಬಂಧನಕ್ಕೆ ಒತ್ತಾಯಸಿ ಉದ್ರಿಕ್ತ ಮುಸ್ಲಿಮರ ಗುಂಪು ಗಲಭೆ ನಡೆಸಿತ್ತು. ಘಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಪೋಲಿಸ್ ವಾಹನಗಳನ್ನು ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದರು. 

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ 89ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದರು. ನಾಲ್ಕು ಬಾಲಕರು ಇದ್ದು, ಅವರನ್ನೂ ಸುಪರ್ದಿಗೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಅಭಿಷೇಕ್ ಗೆ ಏ. 30ರವರೆಗೆ ನ್ಯಾಯಾಂಗ ಬಂಧನ
ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ಗೆ ಹಾಕಿಕೊಂಡು ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠಗೆ ನಗರದ ಕೋರ್ಟ್ ಏ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಅಭಿಷೇಕ್ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ


   ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

   ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

   ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

   ಈ ವಿಭಾಗದಿಂದ ಇನ್ನಷ್ಟು