ಗುರುವಾರ , ಜುಲೈ 7, 2022
20 °C

ಹುಬ್ಬಳ್ಳಿ ಗಲಭೆ: ಪಿಯುಸಿ ಪರೀಕ್ಷೆ ಬರೆದು ಜೈಲಿಗೆ ಮರಳಿದ ಆರೋಪಿ ಅಭಿಷೇಕ ಹಿರೇಮಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ಗಲಭೆಗೆ ಕಾರಣವಾಗಿದ್ದ ಆಕ್ಷೇಪಾರ್ಹ ವಾಟ್‌ಆ್ಯಪ್‌ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ ಅಭಿಷೇಕ ಹಿರೇಮಠ ಶುಕ್ರವಾರ ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ವಾಪಸ್ ಜೈಲಿಗೆ ಮರಳಿದ್ದಾನೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಯಾಗಿರುವ ಅಭಿಷೇಕ, ಇಂದು ವ್ಯವಹಾರ ಅಧ್ಯಯನ (ಬಿಸಿನೆಸ್ ಸ್ಟಡಿ) ವಿಷಯದ ಪರೀಕ್ಷೆ ಬರೆದಿದ್ದಾನೆ. ಮಧ್ಯಾಹ್ನ 1.30ರ ಹೊತ್ತಿಗೆ ಪರೀಕ್ಷೆ ಮುಗಿಸಿ ಹೊರಬಂದ ಆತನನ್ನು ಪೊಲೀಸ್ ಭದ್ರತೆಯಲ್ಲಿ ಇಲ್ಲಿನ ಉಪ ಕಾರಾಗೃಹಕ್ಕೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇವನ್ನೂ ಓದಿ

ಪ್ರಚೋದನಕಾರಿ ಪೋಸ್ಟ್‌: ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು