ಭಾನುವಾರ, ಡಿಸೆಂಬರ್ 4, 2022
19 °C

ಹುಬ್ಬಳ್ಳಿಯ ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಕಾರ್ಖಾನೆಯಲ್ಲಿ ಶನಿವಾರ ನಡೆದ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕಿಮ್ಸ್'ಗೆ ದಾಖಲಾಗಿದ್ದ ಕಲಘಟಗಿಯ ಮಾಳೇಶ ಹದ್ದನ್ನವರ(25) ಮತ್ತು ತಾರಿಹಾಳದ ಗೌರವ್ವ ಹಿರೇಮಠ(45) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ವಿಜಯಲಕ್ಷ್ಮಿ ಯಚ್ಚನಗಾರ(34) ಮೃತಪಟ್ಟಿದ್ದರು. ಗಾಯಗೊಂಡಿದ್ದ ಎಂಟು ಕಾರ್ಮಿಕರಲ್ಲಿ ಈ ಮೂವರಿಗೆ ಶೇ 80ಕ್ಕಿಂತಲೂ ಹೆಚ್ಚು ಭಾಗ ಸುಟ್ಟು ಹೋಗಿತ್ತು. ಇನ್ನುಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

ಕಾರ್ಖಾನೆ ಬಾಡಿಗೆ ಪಡೆದಿದ್ದ ಮುಂಬೈ ಉದ್ಯಮಿ ಅಬ್ದುಲ್ ಶೇಖ್ ತಲೆಮರೆಸಿಕೊಂಡಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು