ಹುಬ್ಬಳ್ಳಿ: ಕೋಳಿವಾಡದ ಶಾಲಾ ಕೊಠಡಿಯಲ್ಲೇ ಶಿಕ್ಷಕ ನೇಣುಬಿಗಿದುಕೊಂಡು ಆತ್ಮಹತ್ಯೆ

7

ಹುಬ್ಬಳ್ಳಿ: ಕೋಳಿವಾಡದ ಶಾಲಾ ಕೊಠಡಿಯಲ್ಲೇ ಶಿಕ್ಷಕ ನೇಣುಬಿಗಿದುಕೊಂಡು ಆತ್ಮಹತ್ಯೆ

Published:
Updated:

ಹುಬ್ಬಳ್ಳಿ: ತಾಲ್ಲೂಕಿನ ಕೋಳಿವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚನ್ನಪ್ಪ ತೋಟಗಂಟಿ(42) ಗುರುವಾರ ಶಾಲೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬೆಳಿಗ್ಗೆ 9.30ಕ್ಕೆ ಶಾಲೆಗೆ ಬಂದ ಅವರು ಕೊಠಡಿಯಲ್ಲಿ ಇದ್ದ ವಿದ್ಯಾರ್ಥಿಗಳನ್ನು ಆಟವಾಡುವಂತೆ ಹೊರಗೆ ಕಳುಹಿಸಿ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಇತರೆ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ’ ಎಂದು ಹುಬ್ಬಳ್ಳಿ ಗ್ರಾಮೀಣ ಬಿಇಒ ಎಸ್‌.ಎಂ.ಹುಡೇದಮನಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸ್‌ ತನಿಖೆಯಿಂದ ತಿಳಿಯಬೇಕಾಗಿದೆ. 9 ವರ್ಷಗಳಿಂದ ಅವರು ಇದೇ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ಅವರ ಹೆಸರಿತ್ತು. ಆದರೆ, ವರ್ಗಾವಣೆಯಾಗಿರಲಿಲ್ಲ’ ಎಂದು ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದವರಾದ ಇವರು, ಸದ್ಯ ಗದಗ ತಾಲ್ಲೂಕಿನ ಮುಳಗುಂದದಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !