ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದ ಮೂವರ ಬಂಧನ

ಹಳೇಹುಬ್ಬಳ್ಳಿ ಠಾಣೆ ಪೊಲೀಸರಿಂದ ಬಂಧನ
Published 23 ಏಪ್ರಿಲ್ 2024, 9:39 IST
Last Updated 23 ಏಪ್ರಿಲ್ 2024, 9:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಿಐಡಿ ಅಧಿಕಾರಿಯೆಂದು ಹಳೇ ಹುಬ್ಬಳ್ಳಿಯ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಮೂವರು ಆರೋಪಿಗಳನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ, ಎರಡು ಮೊಬೈಲ್ ಮತ್ತು ಬುಲೆಟ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಹಳೇಹುಬ್ಬಳ್ಳಿ ಕೃಷ್ಣಾಪುರ ಓಣಿಯ ಚೇತನ ಹಡಪದ, ಲಿಂಗಸೂರಿನ ಪರಶುರಾಮಗೌಡ ಪಾಟೀಲ ಮತ್ತು ಗಂಗಾವತಿ ಕಾರಟಗಿಯ ಮಧು ಎಂ. ಬಂಧಿತರು.

ಹಳೇಹುಬ್ಬಳ್ಳಿ ಚೈತನ್ಯ ನಗರದ ಯಶೋಧಾ ಅವರಿಗೆ ಸಿಐಡಿ ಕ್ರೈಂ ಬ್ರ್ಯಾಂಚ್ ಪೋಲಿಸರು ಎಂದು ಸುಳ್ಳು ಹೇಳಿ, ಬೆದರಿಸಿ ಹಣ ಪಡೆದುಕೊಂಡಿದ್ದರು. ಈ ಕುರಿತು ಮಹಿಳೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು‌.

ತನಿಖೆ ಕೈಗೊಂಡಿದ್ದ ಇನ್‌ಸ್ಪೆಕ್ಟರ್ ಸುರೇಶ ಯಳ್ಳೂರ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT