ಗುರುವಾರ , ಮೇ 19, 2022
21 °C

ಹುಬ್ಬಳ್ಳಿಯಲ್ಲಿ ರೈಲಿಗೆ ಸಿಲುಕಿ ಎರಡೂ ಕಾಲು ಕಳೆದುಕೊಂಡ ವ್ಯಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ತನ್ನೆರಡು ಕಾಲುಗಳನ್ನು ಕಳೆದುಕೊಂಡಿರುವ ಘಟನೆ ನಗರದ ಕಿಮ್ಸ್ ಹಿಂಭಾಗದಲ್ಲಿರುವ ರೈಲ್ವೆ ಹಳಿ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ತಂಡಾದ ಕಾಲುಗಳ ಸಮೇತ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಲ್ಲಿನ ರೈಲ್ವೆ ನಿಲ್ದಾಣದಿಂದ‌ ಹೊರಟ ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ವ್ಯಕ್ತಿ ಸಿಲುಕಿದ್ದಾನೆ. ಹಳಿ ಮೇಲೆ ಆತ ಇರುವುದನ್ನು ದೂರದಲ್ಲೇ ಗಮನಿಸಿದ ಲೋಕೊಪೈಲಟ್ ಹಾರ್ನ್ ಮಾಡಿದರೂ ವ್ಯಕ್ತಿ ಪಕ್ಕಕ್ಕೆ ಸರಿದಿಲ್ಲ. ನಂತರ ಅವರು ರೈಲನ್ನು ನಿಲುಗಡೆ ಮಾಡಿದರೂ, ವ್ಯಕ್ತಿಯ ಕಾಲುಗಳ ಮೇಲೆ ಎಂಜಿನ್ ಸೇರಿದಂತೆ ಎರಡ್ಮೂರು ಬೋಗಿಗಳ ಗಾಲಿಗಳು ಹತ್ತಿವೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದರು.

ಹೆಗ್ಗೇರಿಯವರಾದ ವ್ಯಕ್ತಿ ತನ್ನ ಕೈ ಮೇಲೆ ಬರೆದುಕೊಂಡಿದ್ದ ಪತ್ನಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯಗಳ ತಿಳಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು