ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ; ಮಧ್ಯಾಹ್ನದಿಂದಲೇ ಬಸ್‌ ಸಂಚಾರ ವಿರಳ

Last Updated 6 ಏಪ್ರಿಲ್ 2021, 12:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಸಾರ್ವಜನಿಕರಿಗೆ ಮಂಗಳವಾರ ಮಧ್ಯಾಹ್ನದಿಂದಲೇ ತಟ್ಟಿದೆ.

ಹುಬ್ಬಳ್ಳಿ ನಿಲ್ದಾಣದಿಂದ ಬೆಂಗಳೂರು, ಮಂಗಳೂರು, ಹೈದರಾಬಾದ್, ಮುಂಬೈ ಸೇರಿದಂತೆ ದೂರದ ಊರುಗಳಿಗೆ ತೆರಳಬೇಕಿದ್ದ ಬಸ್‌ ಚಾಲಕರು ಹಾಗೂ ಕಂಡಕ್ಟರ್‌ ಕರ್ತವ್ಯಕ್ಕೆ ಬಂದಿಲ್ಲ. ಹಾಗಾಗಿ, ಆ ಮಾರ್ಗಗಳ ಬಸ್‌ ಸಂಚಾರ ಆರಂಭಿಸಿಲ್ಲ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 4,300 ಮಾರ್ಗಗಳಲ್ಲಿ ಸಂಚರಿಸಬೇಕಿದ್ದ ಬಸ್‌ಗಳ ಪೈಕಿ ಮಂಗಳವಾರ ಮಧ್ಯಾಹ್ನದಿಂದಲೇ 1,000ಕ್ಕೂ ಹೆಚ್ಚು ಮಾರ್ಗಗಳಲ್ಲಿ ಸಂಚರಿಸಬೇಕಿದ್ದ ಬಸ್‌ಗಳ ಸಂಚಾರ ರದ್ದುಗೊಳಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ಬಸ್ ಸಂಚಾರ ಎಂದಿನಂತೆ ಇತ್ತು. ಮಧ್ಯಾಹ್ನದಿಂದ ಬಸ್‌ಗಳ ಸಂಚಾರ ಕಡಿಮೆಯಾಗುತ್ತಾ ಬಂದಿದೆ. ಪರಿಣಾಮ ನಿಲ್ದಾಣಗಳಲ್ಲಿ ಪ್ರಯಾಣಿಕರು ಬಸ್‌ಗಳಿಗಾಗಿ ಪರದಾಡಬೇಕಾಯಿತು.

ರಾತ್ರಿ ಹೊರಡಬೇಕಿದ್ದ ಹಲವಾರು ಬಸ್‌ಗಳ ಸಂಚಾರವೂ ರದ್ದಾಗಿದೆ. ಈಗಾಗಲೇ ಟಿಕೆಟ್‌ ಕಾಯ್ದಿರಿಸಿದ ಪ್ರಯಾಣಿಕರು ಗೊಂದಲಕ್ಕಿಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT