ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲಾಭಿವೃದ್ಧಿ ಕೇಂದ್ರವಾಗಿ ಹುಬ್ಬಳ್ಳಿ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Last Updated 16 ಆಗಸ್ಟ್ 2021, 10:57 IST
ಅಕ್ಷರ ಗಾತ್ರ

ಹುಬ್ಬಳ್ಳಿ:‘ಹುಬ್ಬಳ್ಳಿ –ಧಾರವಾಡವನ್ನು ಕರ್ನಾಟಕದ ಕೌಶಾಲಾಭಿವೃದ್ದಿ ಕೇಂದ್ರವಾಗಿ ಮಾಡಲು ಚರ್ಚೆ ಪ್ರಾರಂಭವಾಗಿದೆ. ರಾಜ್ಯ ಸರ್ಕಾರ ಯೋಜನೆಯ ಪ್ರಸ್ತಾವ ಸಿದ್ಧಪಡಿಸಿ ಕಳಿಸಿದ ನಂತರ, ಜಾರಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಕೌಶಲಾಭಿವೃದ್ದಿ ಹಾಗೂ ಉದ್ದಮಶೀಲತೆ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.

‘ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಗದ್ದಲ ಸೃಷ್ಟಿಸಿದವು. ಪೆಗಾಸಸ್ ಪ್ರಕರಣ, ಕೃಷಿ ಕಾಯ್ದೆಗಳು, ರೈತರ ಪ್ರತಿಭಟನೆ ಕುರಿತು ಸರ್ಕಾರ ಚರ್ಚೆ ನಡೆಸಲು ಸಿದ್ಧವಿದ್ದರೂ, ಗೊಂದಲ ಸೃಷ್ಟಿಸಿ ಅಧಿವೇಶನಕ್ಕೆ ತಡೆಯೊಡ್ಡಿದವು. ಪೂರ್ವಯೋಜಿತವಾದ ಇಂತಹ ನಡವಳಿಕೆ ಪ್ರಜಾಪ್ರಭುತ್ವದ ಲಕ್ಷಣವಲ್ಲ’ ಎಂದು ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಬೇರೆ ಮಾರ್ಗವಿಲ್ಲ:‘ಕೋವಿಡ್‌–19 ಸೃಷ್ಟಿಸಿದ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ತೈಲ ಹಾಗೂ ಅಗತ್ಯ ವಸ್ತಗಳ ದರವನ್ನು ಏರಿಕೆ ಮಾಡಿದೆ. ಇಂತಹ ಸಂದರ್ಭದಲ್ಲಿ ಆದಾಯ ಸಂಗ್ರಹಕ್ಕೆ ಸರ್ಕಾರದ ಬಳಿ ಬೇರೆ ಮಾರ್ಗವಿರಲಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT