ಶನಿವಾರ, ಜನವರಿ 16, 2021
21 °C

ಹುಬ್ಬಳ್ಳಿ: ಲಾರಿ ಅಪಘಾತದಲ್ಲಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬುಧವಾರ ಬೆಳಿಗ್ಗೆ ಪತ್ರಿಕೆ ಹಾಗೂ ಉಪಾಹಾರ ತರಲು ಬಂದಿದ್ದ ಯುವಕನ ಮೇಲೆ ಈರುಳ್ಳಿ ತುಂಬಿದ ಲಾರಿ ಚಲಿಸಿದ ರಿಣಾಮ ಆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ವಿದ್ಯಾನಗರದ ಕಾಡಸಿದ್ದೇಶ್ವರ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದೆ. ಮಧ್ಯಪ್ರದೇಶದಿಂದ ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಗೆ ಈರುಳ್ಳಿ ತೆಗೆದುಕೊಂಡು ಹೋಗುವಾಗ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ನಗರದ ಕೇಶ್ವಾಪುರದ 17 ವರ್ಷದ ಜುನೈದ ಶೇಕ್  ಮೃತ ವ್ಯಕ್ತಿ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ತಲೆಯ ಮೇಲೆಯೇ ಲಾರಿ ಹಾದು ಹೋಗಿದ್ದರಿಂದ ಮುಖ ಗುರುತು ಸಿಗದಷ್ಟು ಛಿದ್ರವಾಗಿದೆ. ಘಟನೆ ನಡೆದ ತಕ್ಷಣವೇ ಲಾರಿ  ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು