ಗುರುವಾರ , ಫೆಬ್ರವರಿ 20, 2020
22 °C

ಹನ್ಸ್‌ ಹೋಟೆಲ್‌: ₹2.46 ಲಕ್ಷದ ಚಿನ್ನಾಭರಣ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಹನ್ಸ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹2.46 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ₹37 ಸಾವಿರ ನಗದು ಕಳುವಾಗಿದೆ.

ಬೆಂಗಳೂರಿನ ನೂರ್‌ಅಹ್ಮದ್ ಅವರು ಗುರುವಾರ ಪತ್ನಿ ಜೊತೆ ಹನ್ಸ್ ಹೋಟೆಲ್‌ನ ಕೊಠಡಿ ಸಂಖ್ಯೆ 106ರಲ್ಲಿ ತಂಗಿದ್ದರು. ತಡರಾತ್ರಿ ಕೊಠಡಿಯ ಕಿಟಕಿಗೆ ಇರುವ ಸ್ಲೈಡಿಂಗ್ ಗ್ಲಾಸ್ ಸರಿಸಿ ಕಳ್ಳರು ಒಳಗೆ ಪ್ರವೇಶಿಸಿದ್ದಾರೆ. ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹1.50 ಲಕ್ಷ ಮೌಲ್ಯದ 100 ಗ್ರಾಂ ತೂಕದ ಬಂಗಾರದ ಮಂಗಳ ಸೂತ್ರ, ₹96 ಸಾವಿರ ಮೌಲ್ಯದ 80 ಗ್ರಾಂ ತೂಕದ ನಕ್ಲೇಸ್ ಹಾಗೂ ₹37 ಸಾವಿರ ನಗದು ಕಳವು ಮಾಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು