ಶನಿವಾರ, ನವೆಂಬರ್ 23, 2019
17 °C

ನಾನೂ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ: ವಿ.ಎಸ್. ಪಾಟೀಲ

Published:
Updated:
Prajavani

ಹುಬ್ಬಳ್ಳಿ: ‘ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ ಅವರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ, ನಾನೂ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗಾಗಿ ಶಿವರಾಮ ಹೆಬ್ಬಾರ ಅವರು ತಮ್ಮ ಶಾಸಕ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅವರಿಗಾಗಿ ಪಕ್ಷದ ನಿರ್ದೇಶನದ ಮೇರೆಗೆ, ನಾನು ಕಣದಿಂದ ಹಿಂದೆ ಸರಿದ್ದೇನೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ, ನಂತರ ನಾನು ಕಣಕ್ಕಿಳಿಯಲಿದ್ದೇನೆ’ ಎಂದರು.

ಪ್ರತಿಕ್ರಿಯಿಸಿ (+)