ಶನಿವಾರ, ಸೆಪ್ಟೆಂಬರ್ 18, 2021
30 °C

ನನಗೆ ನೈತಿಕತೆ ಇದೆ ಸ್ವಾಭಿಮಾನ ಬಿಟ್ಟು ಹೇಗೆ ಸಂಪುಟ ಸೇರಲಿ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೇಗೆ ಸಂಪುಟ ಸೇರಲಿ.‌ ನನಗೂ ಸ್ವಾಭಿಮಾನ ಮತ್ತು ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿರುವ ಆರೆಸ್ಸೆಸ್ ಕಚೇರಿಯಲ್ಲಿ ಗುರುವಾರ  ಸಂಘ ಪರಿವಾರದ  ಮುಖಂಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಮುಂದುವರೆಯಲು ಸಾಧ್ಯವಿಲ್ಲ. ಸದ್ಯ ನಾನು ಶಾಸಕನಿದ್ದೇನೆ. ಮಂತ್ರಿ ಇಲ್ಲದಿದ್ದರೂ ಅಭಿವೃದ್ಧಿ ಮಾಡಬಹುದು‌. ಅಭಿವೃದ್ಧಿ ಮಾಡಿ ತೋರಿಸುತ್ತೇನೆ. ಪ್ರಹ್ಲಾದ ಜೋಶಿ ಕೇಂದ್ರ ಸಚಿವರು ಈ ಭಾಗದವರೇ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಧಾರವಾಡ ಜಿಲ್ಲೆಯವರೇ ಎಂದರು.

ಶೆಟ್ಟರ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ಬೆಳಿಗ್ಗೆ ಹೇಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಕಡೆ ಕ್ಷಣದಲ್ಲಿ ಭೇಟಿ ರದ್ದುಗೊಳಿಸಿದರು.

ಇದನ್ನೂ ಓದಿ... ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಲಾರೆ: ಜಗದೀಶ ಶೆಟ್ಟರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು