ಬುಧವಾರ, ಜನವರಿ 19, 2022
23 °C

ಗೊಂದಲ ಪರಿಹರಿಸಿದ್ದೇನೆ: ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಹಾನಗಲ್‌ನಲ್ಲಿ ಅಸಮಾಧಾನ ಹೊಂದಿದ್ದ ಕೆಲವರನ್ನು ಭೇಟಿ ಮಾಡಿ ಅನುದಾನದ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಐದು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾವೇರಿಯಲ್ಲಿ ನಡೆದ ಸಮಾವೇಶದಲ್ಲಿ ಕೆಲವರು ಅನುದಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ನಮ್ಮ ಅವಧಿಗೆ ಕೇವಲ ₹2 ಕೋಟಿ ಮಾತ್ರ ಅನುದಾನ ದೊರೆಯುತ್ತದೆ. ಇದನ್ನು ಏಳು ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಬೇಕು. ಈ ವಿಷಯವನ್ನು ಅಸಮಾಧಾನ ಹೊಂದಿದವರಿಗೆ ತಿಳಿಸಿ, ಅವರಲ್ಲಿರುವ ಗೊಂದಲ ಪರಿಹರಿಸಿದ್ದೇನೆ’ ಎಂದರು.

‘ನನ್ನ ಸ್ಪರ್ಧೆ ವಿರುದ್ಧ ಯಾರೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಹಾವೇರಿ, ಬ್ಯಾಡಗಿ, ಹಾನಗಲ್ ಕಡೆಗಳಲ್ಲಿ ಸಮಾವೇಶ ನಡೆಸಿ, ಗ್ರಾಮ ಪಂಚಾಯ್ತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಹಾವೇರಿಯಲ್ಲಿ ಬಂಡಾಯ ಅಭ್ಯರ್ಥಿ ಸ್ಪರ್ಧಿಸಿದ್ದರೂ ನನ್ನ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರದು. ಎರಡು ಅವಧಿಗೆ ಮತ ನೀಡಿದ ಮತದಾರರು ಮೂರನೇ ಬಾರಿಯೂ ನನ್ನ ಕೈ ಹಿಡಿಯಲಿದ್ದಾರೆ’ ಎಂದು ಹೇಳಿದರು.

‘ಚುನಾವಣೆ ಗೆಲುವಿನ ನಂತರ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತೇನೆ. ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮುಖಂಡರಾದ ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ, ರಾಜಣ್ಣ ಕೊರವಿ ಮತ್ತು ರವಿ ನಾಯಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು