ಧಾರವಾಡ: ‘ನಾನು ಯಾವ ರೇಸ್‌ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ. ಅವರ ನಾಯಕತ್ವದ ಬಗ್ಗೆ ಯಾರಿಗೂ ಅಸಮಾಧಾನ ಯಾರಿಗೂ ಇಲ್ಲ’ ಎಂದು ಹೇಳಿದರು.
ಮುಖ್ಯಮಂತ್ರಿಯಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿರುವುದಾಗಿ ಸುದ್ದಿಗಾರರು ಕೇಳಿದಾಗ, ‘ಆಸೆ ಬೇರೆ, ದುರಾಸೆಯೇ ಬೇರೆ. ಆಸೆ, ದುರಾಸೆಪಡಲು ಅವಕಾಶ ಇಲ್ಲ’ ಎಂದು ಅವರು ಉತ್ತರಿಸಿದರು.
‘ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಗೆ ಭೇಟಿ ನೀಡಿದ್ದಾರೆ. ರಾಜ್ಯಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ ಅಷ್ಟೆ’ ಎಂದರು.