ಬುಧವಾರ, ಏಪ್ರಿಲ್ 14, 2021
24 °C

ಹುಬ್ಬಳ್ಳಿಯಲ್ಲಿ ದಿಢೀರ್ ತೆರವು ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಸ್ತೆಯ ಬದಿಯಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ‌ಇಟ್ಟುಕೊಂಡಿದ್ದವರಿಗೆ ಪಾಲಿಕೆ, ಜಿಲ್ಲಾಡಳಿತದ ಬಿಸಿ ಮುಟ್ಟಿಸಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಮ್ಮುಖದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು. 

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರಿಂದ ವ್ಯಾಪಾರಿಗಳಿಗೆ ಎಚ್ಚರಿಕೆ ನಿಡಲಾಯ್ತು. 

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ದಾಜೀಬಾನ್ ಪೇಟೆವರೆಗೆ ಕಾರ್ಯಾಚರಣೆ ನಡೆಯಿತು.

ತೆರವು ಕಾರ್ಯಾಚರಣೆಗೆ ವ್ಯಾಪಾರಸ್ಥರ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಪೊಲೀಸರು ಮತ್ತು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು