ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಅನುಷ್ಠಾನಕ್ಕೆ ಬದ್ಧ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published 12 ಮಾರ್ಚ್ 2024, 15:59 IST
Last Updated 12 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ನವಲಗುಂದ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಪಟ್ಟಣದ ಎಸ್‌ಬಿಐ ಬ್ಯಾಂಕ್ ಕಟ್ಟಡದಲ್ಲಿ ತೆರೆಯಲಾಗಿರುವ ಲೋಕಸಭಾ ಕ್ಷೇತ್ರದ ಕಾರ್ಯಾಲಯವನ್ನು ಬಿಜೆಪಿ, ಜೆಡಿಎಸ್ ಮುಖಂಡರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮೂರ್ನಾಲ್ಕು ವರ್ಷಗಳಲ್ಲಿ ನವಲಗುಂದ– ವಿಜಯಪುರ ರಸ್ತೆಯನ್ನ 4 ಪಥದ ರಸ್ತೆ ಹಾಗೂ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಿಸಲಾಗುವುದು’ ಎಂದರು. 

‘ನಮ್ಮ ಸರ್ಕಾರ ₹3 ಲಕ್ಷ ಕೋಟಿ ಯನ್ನು ರೈತರ ಖಾತೆಗೆ ಜಮಾ ಮಾಡಿದೆ. ಧಾರವಾಡ ಜಿಲ್ಲೆಗೆ ಜಲಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರಿನ ಯೋಜನೆ ಜಾರಿಗೆ ₹1,400 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದರು.

ಮುಖಂಡರಾದ ಶಂಕರ ಪಾಟೀಲ ಮುನೇನಕೊಪ್ಪ, ಕೆ.ಎನ್.ಗಡ್ಡಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ನವೀನ, ಆರ್.ಬಿ.ಶಿರಿಯಣ್ಣವರ, ಬಿ.ಬಿ.ಗಂಗಾಧರಮಠ, ನಿಂಗಪ್ಪ ಸುತಗಟ್ಟಿ, ಷಣ್ಮುಖ ಗುರಿಕಾರ, ಸಿದ್ದನಗೌಡ ಪಾಟೀಲ, ಸುರೇಶ ಗಾಣಗೇರ, ಜಯಪ್ರಕಾಶ ಬದಾಮಿ, ಬಸಣ್ಣ ಬೆಳವಣಕಿ, ಶಿವಶಂಕರ ಕಲ್ಲೂರ್, ಗಂಗಪ್ಪ ಮನಮಿ, ಮಲ್ಲಿಕಾರ್ಜುನ ಸಂಗನಗೌಡ್ರ, ನಿಂಗಪ್ಪ ಬಾರಕೇರ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT