ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಅನುಷ್ಠಾನ: ಸಚಿವ ಸುಧಾಕರ

ಕರ್ನಾಟಕ ವಿಶ್ವವಿದ್ಯಾಲಯದ 74ನೇ ಘಟಿಕೋತ್ಸವ ಸಮಾರಂಭ
Published : 24 ಸೆಪ್ಟೆಂಬರ್ 2024, 14:20 IST
Last Updated : 24 ಸೆಪ್ಟೆಂಬರ್ 2024, 14:20 IST
ಫಾಲೋ ಮಾಡಿ
Comments

ಧಾರವಾಡ: ‘ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಆ ನಿಟ್ಟಿನಲ್ಲಿ ಪ್ರಸಕ್ತ ವರ್ಷ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌ಗಳಿಗೆ ಸಮಾನಾಂತರವಾಗಿ ಪ್ರವೇಶಾತಿ ನಡೆಸಲಾಗುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ತಿಳಿಸಿದರು.

ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಮಂಗಳವಾರ 74ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಕೋವಿಡ್‌ ನಂತರದಲ್ಲಿ ಇಡೀ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಏರುಪೇರಾಗಿದೆ. ಸಮಿಸ್ಟರ್‌ಗಳಲ್ಲಿ ಗರಿಷ್ಠ ಎಷ್ಟು ಗಂಟೆ ಬೋಧನೆ ನಡೆಯಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವೇಳಾಪಟ್ಟಿ ಸಮಾಂತರವಾಗಿಸಲು ಪ್ರಯತ್ನಿಸುವಂತೆ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷದೊತ್ತಿಗೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ರೂಪಿಸಲು ಕ್ರಮ ವಹಿಸಲಾಗುವುದು. ಯಾವುದೇ ಗೊಂದಲಗಳಾಗದಂತೆ ಎಚ್ಚರವಹಿಸಲಾಗುವುದು.ನಿರ್ದಿಷ್ಟ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸಬೇಕು, ನಿರ್ದಿಷ್ಟ ಸಮಯಕ್ಕೆ ಫಲಿತಾಂಶ ಪ್ರಕಟಿಸಬೇಕು ಎಂದು ಹಲವು ಸುಧಾರಣಾ ಕ್ರಮಗಳನ್ನು ರೂಪಿಸಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎಲ್ಲವೂ ಸರಿಯಾಗಲಿದೆ ಎಂದರು.

ನಿರುದ್ಯೋಗ ಸಮಸ್ಯೆ ನಿವಾರಿಸಲು ಸರ್ಕಾರ ಹೆಜ್ಜೆ ಇಟ್ಟಿದೆ. ಕೈಗಾರಿಕೆಗಳ ನಿರೀಕ್ಷೆಗಳಿಗೆ ತಕ್ಕ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ಕಾರ್ಯಕ್ರಮ ರೂಪಿಸಿ ಕ್ರಮ ವಹಿಸಿದ್ದೇವೆ. ಪದವಿ, ಸ್ನಾತಕೋತ್ತರ ಪದವಿ ಮೊದಲಾದ ಕೋರ್ಸ್‌ಗಳನ್ನು ಪೂರೈಸಿದವರಿಗೆ ಉದ್ಯೋಗ ಲಭಿಸುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಟ್ಟಿದೆ ಎಂದರು.

ಪದವಿ, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್‌ ಪಡೆದವರಿಗೆ ಪದಕ, ಪ್ರಮಾಣ ಪತ್ರ ವಿತರಿಸಲಾಯಿತು. ಪಿಎಚ್.ಡಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಯಿತು.

ಮರೇಗುದ್ದಿಯ ನಿರುಪಾಧೀಶ ಸ್ವಾಮೀಜಿ, ಉದ್ಯಮಿ ವೆಂಕಟಸತ್ಯವರಪ್ರಸಾದ ಹಾಗೂ ಎಸ್‌.ಎನ್‌.ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಕುಲಪತಿ ಪ್ರೊ.ಕೆ.ಬಿ.ಗುಡಸಿ, ಆಡಳಿತಾಂಗ ಕುಲಸಚಿವ ಎ.ಚನ್ನಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ನಿಜಲಿಂಗಪ್ಪ ಮಟ್ಟಿಹಾಳ, ಪ್ರೊ.ಎಸ್‌.ಅಯ್ಯಪ್ಪನ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT