2026ರ ಏಪ್ರಿಲ್ 20ರಿಂದ 24ರವರೆಗೆ ಹುಬ್ಬಳ್ಳಿಯ ಅಮರಗೋಳದಲ್ಲಿರುವ ಹುಬ್ಬಳ್ಳಿ–ಧಾರವಾಡ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುವ ಇನ್‍ಕಾಮೆಕ್ಸ್ ಕಾರ್ಯಕ್ರಮದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಬೇಕು. ಸಿರಿಧಾನ್ಯಗಳ ಮೇಳ ವ್ಯಾಪಾರ ಅಭಿವೃದ್ಧಿ ವಿಚಾರ ಸಂಕಿರಣ ಬಿ2ಬಿ ಸಭೆಗಳು ಪ್ರಚಲಿತ ಸಂಗತಿಗಳ ಚರ್ಚೆ ಮಹಿಳಾ ಉದ್ದಿಮೆದಾರರಿಗೆ ಪ್ರಾಶಸ್ತ್ಯ ಆಯಾ ಭಾಗದ ಕೈಗಾರಿಕೆಗಳ ಸಹಭಾಗಿತ್ವ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕರ್ಟನ್ ರೇಸರ್ ಕಾರ್ಯಕ್ರಮ ಆಯೋಜಿಸಬೇಕೆಂಬ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾದವು.