ಸೋಮವಾರ, ಫೆಬ್ರವರಿ 24, 2020
19 °C

ಜಡ್ಜ್‌ಗಳ ನಿವೃತ್ತಿ ವಯಸ್ಸು 65ಕ್ಕೆ ಹೆಚ್ಚಳಕ್ಕೆ ಒತ್ತಾಯ: ಪ್ರಧಾನಿಗೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಕೆಳ ಹಂತದ ನ್ಯಾಯಾಲಯಗಳ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62ರಿಂದ 65ಕ್ಕೆ ಏರಿಸಬೇಕು’ ಎಂದು ಕೋರಿ ವಕೀಲ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಮೋಹನ ಎ. ಲಿಂಬಿಕಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.

‘ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಹೈಕೋರ್ಟ್‌ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 62ರಿಂದ 65ಕ್ಕೆ ಹೆಚ್ಚಿಸುವ ಹಾಗೂ ಖಾಲಿ ಹುದ್ದೆಗಳನ್ನು ತುಂಬುವ ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಆದರೆ, ಕೆಳಹಂತದ ನ್ಯಾಯಾಧೀಶರನ್ನು ಇದರಿಂದ ಹೊರಗಿಡುವುದು ಸರಿಯಲ್ಲ. ಕಾರ್ಯಸಾಮರ್ಥ್ಯವಿರುವ ಅವರ ನಿವೃತ್ತಿ ವಯಸ್ಸನ್ನೂ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಉಳಿಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ರಾಷ್ಟ್ರೀಯ ನ್ಯಾಯಿಕ ದತ್ತಾಂಶದ ಪ್ರಕಾರ ಸುಪ್ರೀಂಕೋರ್ಟ್‌ನಲ್ಲಿ 57,987, ಹೈಕೋರ್ಟ್‌ಗಳಲ್ಲಿ 43 ಲಕ್ಷ ಹಾಗೂ ಕೆಳ ಹಂತದ ನ್ಯಾಯಾಲಯಗಳಲ್ಲಿ 2.84 ಕೋಟಿ ಪ್ರಕರಣಗಳು ಬಾಕಿ ಇವೆ. ಇವುಗಳ ಇತ್ಯರ್ಥಕ್ಕಾಗಿ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರ ಸಂಖ್ಯೆಯೂ ಹೆಚ್ಚಾಗಬೇಕಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು