ಅಂಬೇಡ್ಕರ್ ಅವರ ವೈಚಾರಿಕ ನಿಲುವುಗಳು ಸಮಾನತೆಯ ತತ್ವಗಳನ್ನು ಅಳವಡಿಸಿಕೊಂಡರೆ ನಿಜವಾದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರ ಕಟ್ಟಲು ಸಾಧ್ಯ
ಎನ್.ಎಚ್.ಕೋನರೆಡ್ಡಿ ಶಾಸಕ
ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿಗಳು ಸಂವಿಧಾನವನ್ನು ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೆ ಮಾತ್ರವಲ್ಲ ವಿಶ್ವಕ್ಕೇ ಜ್ಞಾನದ ಸಂಕೇತವಾಗಿದ್ದಾರೆ
ದಿವ್ಯಪ್ರಭು ಜಿಲ್ಲಾಧಿಕಾರಿ
‘ಸಂವಿಧಾನದ ಮೌಲ್ಯ ಜೀವನ ಭಾಗವಾಗಲಿ’
ನಮ್ಮ ಸಶಕ್ತ ಸಂವಿಧಾನದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಗಳಿಸಿದ್ದು ಸಂವಿಧಾನದ ಮೌಲ್ಯಗಳು ನಿತ್ಯ ಜೀವನದ ಭಾಗವಾಗಬೇಕು’ ಎಂದು ಡಯಟ್ ಪ್ರಾಚಾರ್ಯ ಗಿರೀಶ ಪದಕಿ ಹೇಳಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಸಂವಿಧಾನದಲ್ಲಿರುವ ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಹಾಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಎಲ್ಲರೂ ತಿಳಿದುಕೊಳ್ಳಬೇಕು’ ಎಂದರು. ಉಪಪ್ರಾಚಾರ್ಯ ಜೆ.ಜಿ.ಸೈಯದ್ ಡಿವೈಪಿಸಿ ಎಸ್‍ಎಂ ಹುಡೇದಮನಿ ಎಪಿಸಿಒ ಪ್ರದೀಪ ರಾಠೋಡ ಇದ್ದರು.