ಭಾನುವಾರ, ಆಗಸ್ಟ್ 14, 2022
24 °C

ಹುಬ್ಬಳ್ಳಿಯಲ್ಲಿ ತಪ್ಪಿದ ಅವಘಡ: ಟೈರ್‌ನಲ್ಲಿ ದೋಷ; ಸುರಕ್ಷಿತ ಲ್ಯಾಂಡ್ ಆದ ವಿಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೇರಳ ರಾಜ್ಯದ ಕಣ್ಣೂರಿನಿಂದ ಹುಬ್ಬಳ್ಳಿಗೆ  ಸೋಮವಾರ ರಾತ್ರಿ 8.30ಕ್ಕೆ ಬಂದ ಇಂಡಿಗೊ ವಿಮಾನ ಹಾರ್ಡ್ ಲ್ಯಾಂಡಿಂಗ್ (ಟೈರ್ ನಲ್ಲಿ ಗಾಳಿ ಕಡಿಮೆ) ಆಗಿದೆ.

ಟೈರ್ ನಲ್ಲಿ ಗಾಳಿ ಕಡಿಮೆಯಾಗಿದ್ದ ಪರಿಣಾಮ ಒಂದೆಡೆ ಒತ್ತಡ ಉಂಟಾಗಿತ್ತು. ಇದರಿಂದ ಹಾರ್ಡ್ ಲ್ಯಾಂಡಿಂಗ್ ಆಗಿದೆ ಎಂದು ಮೂಲಗಳು ತಿಳಿಸಿವೆ.

ವಿಮಾನದಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದರು. ಅವರು ಸುರಕ್ಷಿತವಾಗಿದ್ದಾರೆ. ಈ ವಿಮಾನ 18 ಪ್ರಯಾಣಿಕರನ್ನು ಹೊತ್ತು  ಬೆಂಗಳೂರಿಗೆ ತೆರಳಬೇಕಾಗಿತ್ತು. ಘಟನೆಯಿಂದಾಗಿ ಬೆಂಗಳೂರು ಪ್ರಯಾಣ ರದ್ದುಪಡಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು