ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಟ್ಟ ‌ಮಂಜು: 24 ನಿಮಿಷ ತಡವಾಗಿ ಲ್ಯಾಂಡ್ ಆದ ಸಿಎಂ ಬೊಮ್ಮಾಯಿ ಇದ್ದ ‌ವಿಮಾನ

Last Updated 10 ಡಿಸೆಂಬರ್ 2021, 2:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ‌ ಶುಕ್ರವಾರಬೆಳಿಗ್ಗೆನಿಂದಲೇ ಮೋಡ ಕವಿದ ವಾತಾವರಣ ಹಾಗೂ ದಟ್ಟ ಮಂಜು ಇರುವ ಕಾರಣ ಬೆಂಗಳೂರಿನಿಂದ ಇಲ್ಲಿಗೆ ಬಂದ ಇಂಡಿಗೊ ಸಂಸ್ಥೆಯ (6E7227) ವಿಮಾನ 24 ನಿಮಿಷ ತಡವಾಗಿ ಲ್ಯಾಂಡ್ ಆಯಿತು.

ಈ ವಿಮಾನದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತ ಚಲಾಯಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದ್ದರು.

ಬೆಳಿಗ್ಗೆ 6.05ಕ್ಕೆ ಬೆಂಗಳೂರಿನಿಂದ ಹೊರಟಿದ್ದ ವಿಮಾನ 7.30ಕ್ಕೆ ಹುಬ್ಬಳ್ಳಿಯಲ್ಲಿ ‌ಲ್ಯಾಂಡ್ ಆಗಬೇಕಿತ್ತು. ಪ್ರತಿಕೂಲ ಹವಾಮಾನದಿಂದಾಗಿ ಕೆಲ ಹೊತ್ತು ಆಗಸದಲ್ಲೇ ಸುತ್ತು ಹೊಡೆದ ಬಳಿಕ ಲ್ಯಾಂಡ್ ಆಯಿತು ಎಂದು ವಿಮಾನ‌ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT