ಅಳ್ನಾವರ: ‘ಇಂದಿರಾ ಕ್ಯಾಂಟೀನ್ ಮಾದರಿ ಯೋಜನೆಯಾಗಿದ್ದು, ಇದನ್ನು ಎಲ್ಲ ತಾಲ್ಲೂಕುಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಇಲ್ಲಿನ ಇಂದಿರಾ ನಗರ ಬಡಾವಣೆಯ ಬಸ್ ನಿಲ್ದಾಣದ ಬಳಿ ₹1.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ನನ್ನ ಮತ ಕ್ಷೇತ್ರದ ಕಲಘಟಗಿ ಮತ್ತು ಅಳ್ನಾವರಕ್ಕೆ ಒಟ್ಟು ಇಂದಿರಾ ಕ್ಯಾಂಟೀನ್ ಅನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಸೇರಿ ದಿನಕ್ಕೆ 900 ಜನರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ’ ಎಂದರು.

‘ಕಲಘಟಗಿ ಭಾಗದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬದುಕು ಹಸನಾಗಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ₹180 ಕೋಟಿ ವೆಚ್ಚದಲ್ಲಿ ಈ ಭಾಗದ 45 ಕೆರೆಗಳಿಗೆ ಈಗಾಗಲೇ ನೀರು ತುಂಬಿಸಲಾಗಿದೆ. ಎರಡನೇ ಹಂತದಲ್ಲಿ ₹180 ಕೋಟಿ ವೆಚ್ಚದಲ್ಲಿ 107 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಂತ ಹಂತವಾಗಿ ಜಾರಿಗೊಳಿಸಲಾಗುತ್ತದೆ’ ಎಂದರು.

‘ಕಲಘಟಗಿ ಹಾಗೂ ಅಳ್ನಾವರ ಭಾಗದಲ್ಲಿ ರೈತರ ಬೆಳೆ ಹಾನಿಯಾಗಿದ್ದು ಸಮೀಕ್ಷೆ ಮಾಡಲು ರೈತರು ಮನವಿ ಮಾಡಿದ್ದಾರೆ. ರೈತರ ಹೊಲಗಳಿಗೆ ತೆರಳಿ ಹಾನಿ ಬಗ್ಗೆ ವರದಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ರೈತರು ಆತಂಕ ಪಡಬಾರದು’ ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಲ್ಲೂಕ ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮೋಲ ಗುಂಜೀಕರ, ಮುಖ್ಯಾಧಿಕಾರಿ ಪ್ರಕಾಶ ಮಗದಮ, ಉಪಾಧ್ಯಕ್ಷ ಛಗನಲಾಲ ಪಟೇಲ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.