ಸೋಮವಾರ, ಸೆಪ್ಟೆಂಬರ್ 28, 2020
23 °C

ಕೋವಿಡ್–19 | ಕಿಮ್ಸ್ ಚಿಕಿತ್ಸೆ, ಉಪಚಾರಕ್ಕೆ ಸೋಂಕಿತರಿಂದ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಕಿಮ್ಸ್‌ನಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ, ಊಟ, ಉಪಚಾರದ ಕ್ರಮಗಳ ಬಗ್ಗೆ ಸೋಂಕಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ಜನರ ಪಾಲಿಗೆ ಸಂಜೀವಿನಿ ಎಂದೇ ಹೆಸರಾಗಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)  ಕೋವಿಡ್ ಕಾಣಿಸಿಕೊಂಡ ಮಾರ್ಚ್ ತಿಂಗಳಿನಿಂದಲೂ ಚಿಕಿತ್ಸೆಗೆ ಸತತವಾಗಿ ಶ್ರಮಿಸುತ್ತಿದೆ. ತಜ್ಞ ವೈದ್ಯರು, ವೈದ್ಯಕೀಯ ಸೌಲಭ್ಯಗಳು , ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿಯ ಕಾರ್ಯ ಉಳಿದ ಆಸ್ಪತ್ರೆಗಳಿಗೂ ಮಾದರಿಯಾಗಿದೆ ಎನ್ನುತ್ತಾರೆ ಕೋವಿಡ್ ನಿಂದ ಗುಣಮುಖರಾದರು.

ಪಿಎಂಎಸ್ ಎಸ್ವೈ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸುಸಜ್ಜಿತ ಕಟ್ಟಡದಲ್ಲಿ ರೋಗಿಗಳ ಆರೈಕೆಯ ಬಗ್ಗೆ ಚಿಕಿತ್ಸೆ ಪಡೆದು ಗುಣಮುಖರಾದವರು, ಕೋವಿಡ್ ವಾರಿಯರ್ಗಳ  ಕರ್ತವ್ಯ ನಿಷ್ಠೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕೋವಿಡ್ ನಿಂದ ಗುಣಮುಖರಾದ ಹುಬ್ಬಳ್ಳಿಯ ಕೇಶ್ವಾಪುರದ ಸೈಯದ್ ಸಮೀವುಲ್ಲಾ ಪಾಷಾ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಿಮ್ಸ್ನ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ  ಉತ್ತಮ ಚಿಕಿತ್ಸೆ ದೊರೆಯಿತು. ಸ್ವಚ್ಚತೆ, ನೈರ್ಮಲ್ಯ ಕಾಲಕಾಲಕ್ಕೆ ಉತ್ತಮ ಪೌಷ್ಟಿಕಾಂಶವುಳ್ಳ ಊಟ, ಉಪಹಾರ, ಸೂಪ್ ನೀಡಿ ಆರೈಕೆ ಮಾಡುತ್ತಿದ್ದಾರೆ. ವೈದ್ಯರು , ಸಿಬ್ಬಂದಿಯ ಶ್ರಮಕ್ಕೆ ಕೃತಜ್ಞನಾಗಿದ್ದೇನೆ ಎಂದು ಖುಷಿ‌ ಹಂಚಿಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು