ಹುಬ್ಬಳ್ಳಿ: ಗೋಕುಲ ರಸ್ತೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಚೇರಿ ಎದುರಿಗೆ ಇನ್ನರ್ ವೀಲ್ ಕ್ಲಬ್ ಹುಬ್ಬಳ್ಳಿ ಪಶ್ಚಿಮ ಶಾಖೆ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಅಖಿಲ ಭಾರತ ಇನ್ನರ ವ್ಹೀಲ್ ಕ್ಲಬ್ಗಳ ಸಂಘದ ಅಧ್ಯಕ್ಷೆ ಸರೋಜಾ ಕಟಿಯಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕ್ಲಬ್ ಹಲವಾರು ಉಪಯುಕ್ತ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ. ಹುಬ್ಬಳ್ಳಿಯ ಎಂಟು ಕ್ಲಬ್ಗಳು ಕ್ರಿಯಾಶೀಲವಾಗಿದ್ದು ಇತರರಿಗೆ ಪ್ರೇರಣೀಯವಾಗಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಲಬ್ನ ಪಶ್ಚಿಮ ಶಾಖೆಯ ಅಧ್ಯಕ್ಷೆ ವಿಜಯಲಕ್ಷ್ಮೀ ಗದ್ವಾಲ ಮಾತನಾಡಿ, ‘ವಿವಿಧ ಕ್ಷೇತ್ರಗಳ ಸಾರ್ವಜನಿಕರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಕ್ಲಬ್ ಹಮ್ಮಿಕೊಳ್ಳುತ್ತಾ ಬಂದಿದೆ. ಪ್ರಯಾಣಿಕರಿಗೆ ಬಿಸಿಲು ಹಾಗೂ ಮಳೆಯಿಂದ ರಕ್ಷಣೆ ಒದಗಿಸುವ ದೃಷ್ಟಿಯಿಂದ ಅಂದಾಜು ₹1.5 ಲಕ್ಷ ವೆಚ್ಚದಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗಿಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ‘ಕ್ಲಬ್ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನೀಯ. ಹುಬ್ಬಳ್ಳಿ ಪಶ್ಚಿಮ ಕ್ಲಬ್ ಸಾರಿಗೆ ಸಂಸ್ಥೆಯ ಹಲವಾರು ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿದೆ’ ಎಂದರು.

ತಂಗುದಾಣ ಪ್ರಾಯೋಜಕರಾದ ವಿಜಯಲಕ್ಷ್ಮೀ ಮತ್ತು ರಾಜಪ್ಪ ಗದ್ವಾಲ ದಂಪತಿಯನ್ನು ಅಭಿನಂದಿಸಲಾಯಿತು. ಉತ್ತರ ಕರ್ನಾಟಕ ಆಟೊರಿಕ್ಷಾ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ಕ್ಲಬ್ ಕಾರ್ಯದರ್ಶಿ ಪೂರ್ಣಿಮಾ ಕಾಡಂಬಿ, ರತ್ನ ಭೇರೆ, ವಾಯವ್ಯ ಸಾರಿಗೆ ಸಂಸ್ಥೆಯ ಪ್ರವೀಣ ಈಡೂರ, ಆಡಳಿತಾಧಿಕಾರಿ ನಾಗಮಣಿ, ಡಿಪೊ ಮ್ಯಾನೇಜರ್ ವೈ.ಎಂ. ಶಿವರೆಡ್ಡಿ ಹಾಗೂ ಕ್ಲಬ್ನ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.