ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಆಡಳಿತ ಹೇರಲು ಒತ್ತಾಯ

Last Updated 9 ಅಕ್ಟೋಬರ್ 2020, 14:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಅಮಾನುಷವಾಗಿ ಕೊಲೆ ಮಾಡುವ ಹೀನ ಕೃತ್ಯಗಳು ಹೆಚ್ಚಾಗುತ್ತಲೇ ಇವೆ. ಉತ್ತರ ಪ್ರದೇಶದ ಯುವತಿಯರು ಮತ್ತು ಹೆಣ್ಣುಮಕ್ಕಳು ಕಾಮ ಪಿಶಾಚಿಗಳಿಂದ ಕೊಲೆಯಾಗುತ್ತಿದ್ದಾರೆ. ಪ್ರಪಂಚಕ್ಕೆ ಆಧ್ಯಾತ್ಮದ ನೆಲೆ ತೋರಿಸಿಕೊಟ್ಟು, ಮಾದರಿ ಸಂವಿಧಾನ ಅಳವಡಿಸಿಕೊಂಡ ಭಾರತದಲ್ಲಿ ಮೇಲಿಂದ ಮೇಲೆ ಈ ರೀತಿಯ ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಈ ಕುರಿತು ರಾಷ್ಟ್ರಪತಿ ಅವರಿಗೆ ಬರೆದ ಮನವಿ ಪತ್ರವನ್ನು ಹುಬ್ಬಳ್ಳಿ ತಹಶೀಲ್ದಾರ್‌ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಕಾನೂನು ಕೈಗೆತ್ತಿಕೊಂಡು ಹೀನ ಕೃತ್ಯ ಮಾಡುವವರಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು. ದೇಶದಲ್ಲಿ ಹೆಣ್ಣುಮಕ್ಕಳು ಗೌರವಯುತ ಬದುಕು ಸಾಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಬಾರಕೇರ, ಮುಖಂಡರಾದ ಅಭಿಷೇಕ ಇಜಾರಿ, ಮಂಜುನಾಥ ಬಾರಕೇರ, ಗಣೇಶ ಕಿರವತ್ತಿ, ವಿಶಾಲ ಸಿಂಗನಹಳ್ಳಿ, ಮಂಜುನಾಥ ಕೊರವರ, ಸದ್ದಾಮ್ ನದಾಫ್‌, ಪವನ ಬಿಜವಾಡ, ಅಪ್ಪು ಜಿಮಾಳಾಪುರ, ವಿಶ್ವನಾಥ ಕೊರವರ, ರಾಜು ಬಿಳಾರ, ವಿನಾಯಕ ಬೆಂಕಿ ಶೆಟ್ಟರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT