ಮಂಗಳವಾರ, ಸೆಪ್ಟೆಂಬರ್ 21, 2021
21 °C

ಸಚಿವ ಬೈರತಿ ಬಸವರಾಜ ಹುಬ್ಬಳ್ಳಿಯಲ್ಲಿ ಕಾಮಗಾರಿಗಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಬೆಳಿಗ್ಗೆ 6.30ರಿಂದಲೇ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೊದಲು ಇಂದಿರಾ ಗಾಜಿನ ಮನೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ವಾಕಿಂಗ್ ಬಂದಿದ್ದ ಜನ ಕಾಮಗಾರಿ ಆರಂಭವಾಗಿ 18 ತಿಂಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಅನಗತ್ಯವಾಗಿ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ. ಕಾಮಗಾರಿ ಮಾಡಿ ಕೈ ಬಿಟ್ಟರೆ ಅವುಗಳ ನಿರ್ವಹಣೆ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಗೋಕುಲ ರಸ್ತೆಯ ಎಂ.ಎಸ್.ಎಂ.ಇ ಕೈಗಾರಿಕಾ ಪ್ರದೇಶ, ಕಾಟನ್ ಮಾರುಕಟ್ಟೆಯ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ, ಎಂ.ಜಿ.ಪಾರ್ಕ್, ಚಿಟಗುಪ್ಪಿ ಆಸ್ಪತ್ರೆ, ಮೀನಿನ ಮಾರುಕಟ್ಟೆ, ತಬೀಬ್ ಲ್ಯಾಂಡ್ ನ ಬಿ.ಎಸ್.ಯು.ಪಿ. ಪ್ಯಾಕೇಜ್ 3 ಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು