ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ಸಂಪೂರ್ಣ ಸಂಗ್ರಹಕ್ಕೆ ಸೂಚನೆ

Last Updated 22 ಮೇ 2022, 2:43 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಜೂನ್ 5ರೊಳಗೆ ಪೂರ್ಣ ಪ್ರಮಾಣದತೆರಿಗೆ ಸಂಗ್ರಹಿಸಲು ಕ್ರಮಕೈಗೊಳ್ಳಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ ನ್ಯಾ. ಸುಭಾಷ್ ಬಿ.ಆಡಿ. ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

‘ಒಳಚರಂಡಿ ಸಮಸ್ಯೆಗೆ ಶೀಘ್ರ ಸ್ಪಂದಿಸಬೇಕು. ತ್ಯಾಜ್ಯ ನಿರ್ವಹಣೆ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿ ರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಮಾತ, ‘ಈಗಾಗಲೇ ಹಸಿರು ಸಂಚಾರ ಪಥದ ಮೊದಲ ಹಂತ ಪೂರ್ಣಗೊಳಿಸಲಾಗಿದ್ದು, ಎರಡನೇ ಹಂತದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 18 ಪ್ರವಾಹ ಪೀಡಿತ ಸ್ಥಳಗಳಲ್ಲಿ ಮಲೇರಿಯಾ, ಡೆಂಗಿ ಪ್ರಕರಣ ಕಡಿಮೆಯಾಗಿವೆ. ಕಟ್ಟಡ ನಿರ್ಮಾಣ ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸಂತೋಷ ಯರಂಗಳಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಶೋಭಾ ಪೋಳ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT