ಹುಬ್ಬಳ್ಳಿ: ಮುಂಬರುವ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಜ್ಜಾಗಬೇಕು, ಪಕ್ಷ ಸಂಘಟನೆಗೆ ಒತ್ತು ಕೊಡಬೇಕು ಎಂದುಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಉಪಚುನಾವಣೆಗೆ ಪಕ್ಷದಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹಿಸಲುನಗರದಲ್ಲಿ ಗುರುವಾರ ಆರಂಭವಾದ ಎರಡು ದಿನಗಳಬೆಳಗಾವಿ ವಿಭಾಗ ಮಟ್ಟದ ಸಮಾವೇಶದಲ್ಲಿಕಾಂಗ್ರೆಸ್ ನಾಯಕರು ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳ ಮುಖಂಡರ ಅಭಿಪ್ರಾಯ ಪಡೆದರು.ಸಿ.ಎಂ. ಉದಾಸಿ (ಹಾನಗಲ್) ಮತ್ತು ಎಂ.ಸಿ. ಮನಗೂಳಿ (ಸಿಂದಗಿ) ಅವರ ನಿಧನದಿಂದ ಕ್ಷೇತ್ರಗಳು ತೆರವಾಗಿವೆ.

ವಿಧಾನಸಭೆ ಮತ್ತು ಲೋಕಸಭೆಯ ಹಿಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಆಯಾ ಜಿಲ್ಲೆಗಳ ಮುಖಂಡರಿಂದ ಮಾಹಿತಿ ಪಡೆದ ನಾಯಕರು, ಕ್ಷೇತ್ರದಲ್ಲಿ ಪಕ್ಷದ ಸ್ಥಾನ ಹೇಗಿದೆ? ಯಾವ ಸ್ಪರ್ಧಿಗೆ ಟಿಕೆಟ್ ನೀಡಿದರೆ ಗೆಲ್ಲಬಹುದು? ಜನರ ಜೊತೆ ಹೆಚ್ಚು ಬೆರೆಯುತ್ತಿರುವ ನಾಯಕರು ಯಾರು ಎನ್ನುವ ಬಗ್ಗೆಯೂ ಮಾಹಿತಿ ಸಂಗ್ರಹಿಸಿದರು.

ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ವೇದಿಕೆ ಮಾಡಿಕೊಂಡು ಪಕ್ಷ ಬಲಪಡಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಪಡೆಯುವಂತೆ ಕೆಲಸ ಮಾಡಬೇಕು. ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಪಕ್ಷ ಸಂಘಟನೆ ಚುರುಕಾಗಬೇಕು ಎಂದು ಆಯಾ ಜಿಲ್ಲೆಗಳ ನಾಯಕರಿಗೆ ಸೂಚಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಸಕ್ರಿಯರಾಗಬೇಕು ಎಂದು ಮುಖಂಡರು ಸೂಚಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದಸಲೀಂ ಅಹ್ಮದ್, ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ,ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಹಾವೇರಿ ಜಿಲ್ಲೆಯ ರುದ್ರಪ್ಪ ಲಮಾಣಿ, ಕೆ.ಬಿ.ಕೋಳಿವಾಡ, ವಿಜಯಪುರ ಜಿಲ್ಲೆಯ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಕೆಪಿಸಿಸಿ ವಕ್ತಾರಪ್ರಕಾಶ ರಾಠೋಡ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.