ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಲಗುಂದ | ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

Published 31 ಜನವರಿ 2024, 14:22 IST
Last Updated 31 ಜನವರಿ 2024, 14:22 IST
ಅಕ್ಷರ ಗಾತ್ರ

ನವಲಗುಂದ: ಕಲಬುರಗಿ ಜಿಲ್ಲೆ ಕೋಟನೂರನಲ್ಲಿ ಬಾಬಾಸಾಹೇಬ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಟೈರ್‌ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಇಲಾಖೆಯ ಶೋಭಾ ಹುಲ್ಲಣ್ಣವರಗೆ ಮನವಿ ಸಲ್ಲಿಸಿತು.

ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಮಾದರ ಮಾತನಾಡಿ, ಕಲಬುರಗಿ ಜಿಲ್ಲಾಡಳಿತ ತನ್ನ ವಿಫಲತೆ ತೋರಿಸಿದ್ದು ಜಿಲ್ಲಾಡಳಿತದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆ ಮತ್ತೊಮ್ಮೆ ಘಟಿಸದಂತೆ ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರ ವಹಿಸಲು ಆದೇಶಿಸಬೇಕೆಂದು ಆಗ್ರಹಿಸಿದರು.

ತಾಲ್ಲೂಕು ಘಟಕದ ಉಪಾಧ್ಯಕ್ಷ ಅಶೋಕ ಮಾದರ, ರಾಜು ಮಾದರ, ಅರ್ಜುನ ಮಾದರ, ಕೃಷ್ಣಾ ಮಾದರ, ಮೈಲಾರಪ್ಪ ಮಾದರ, ನಾಗರಾಜ ಮಾದರ, ಫಕ್ಕೀರಪ್ಪ ಗಿರೀಶ ಮಾದರ, ಮಾದೇವಪ್ಪ ಮಾದರ, ಬಸಪ್ಪ ಮಾದರ ಇನ್ನಿತರರಿದ್ದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ನವಲಗುಂದ ಪಟ್ಟಣದ ಲಿಂಗರಾಜ ವೃತ್ತದಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಹೆದ್ದಾರಿ ಬಂದ್ ಮಾಡಿ ಟೈ‌ರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು
ನವಲಗುಂದ ಪಟ್ಟಣದ ಲಿಂಗರಾಜ ವೃತ್ತದಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಹೆದ್ದಾರಿ ಬಂದ್ ಮಾಡಿ ಟೈ‌ರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT