ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಲಾಡ್‌ಗೆ ಅವಮಾನ; ಮರಾಠ ಸಮಾಜದಿಂದ ಪ್ರತಿಭಟನೆ

Published 24 ಏಪ್ರಿಲ್ 2024, 8:08 IST
Last Updated 24 ಏಪ್ರಿಲ್ 2024, 8:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವಾಚ್ಯವಾಗಿ ನಿಂದಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿ ಮರಾಠ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಚನ್ನಮ್ಮ‌ ವೃತ್ತದಲ್ಲಿ ಒಂದೆಡೆ ಸೇರಿದ ಪ್ರತಿಭಟನಾಕಾರರು, ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಚನ್ನಮ್ಮ ವೃತ್ತದಿಂದ ಮಿನಿವಿಧಾನ ಸೌಧದವರಗೆ ಮೆರವಣೆಗೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

'ಬಿ.ವೈ. ವಿಜಯೇಂದ್ರ ಅವರು ಸಚಿವ ಲಾಡ್ ಅವರಿಗೆ ಕೀಳುಮಟ್ಟದ ಪದಗಳಿಂದ ನಿಂದಿಸಿದ್ದಾರೆ. ಅವರ ವ್ಯಕ್ತಿತ್ವಕ್ಕೆ ಹಾಗೂ ಸಾಂವಿಧಾನಿಕ ಸ್ಥಾನಕ್ಕೆ ಅಗೌರವ ತಂದಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಿಸಿದ್ದಾರೆ. ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ಮಯೂರ ಮೋರೆ, ಪ್ರೇಮನಾಥ ಚಿಕ್ಕತುಂಬಳ, ಗುರುನಾಥ ಉಳ್ಳಿಕಾಶಿ ಸೇರಿದಂತೆ ಸಂತೋಷ ಲಾಡ್ ಅಭಿಮಾನಿಗಳು ಹಾಗೂ ಮರಾಠ ಸಮುದಾಯದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT