ಹುಬ್ಬಳ್ಳಿ: ‘ಕನ್ನಡವನ್ನು ಬಳಸುವ ಜೊತೆಗೆ, ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಭಾಷೆಯನ್ನು ನಾವು ಬೆಳೆಸಿದರೆ, ಅದು ನಮ್ಮನ್ನು ಬೆಳೆಸುತ್ತದೆ’ ಎಂದುನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ದೇವೇಂದ್ರಪ್ಪ ಎನ್. ಬಿರಾದಾರ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ಉಪ ಕಾರಾಗೃಹದಲ್ಲಿಸೋಮವಾರ‘ಕಲಿಕೆಯಿಂದ ಬದಲಾವಣೆ’ಗಾಗಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ, ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಕೈದಿಗಳಿಗೆ ಕಲಿಕಾ ಬೋಧನಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಮುಂಚೆ ಐನೂರಕ್ಕೂ ಹೆಚ್ಚು ಪ್ರಾಂತ್ಯಗಳು ರಾಜರ ಆಳ್ವಿಕೆಯಲ್ಲಿದ್ದವು.ಸ್ವಾತಂತ್ರ್ಯ ನಂತರ ಭಾಷೆ ಆಧಾರದಲ್ಲಿ ರಾಜ್ಯಗಳ ರಚನೆಯಾಯಿತು. ಜಗತ್ತಿನ ಶ್ರೇಷ್ಠ ಭಾಷೆಗಳಲ್ಲೊಂದಾದ ಕನ್ನಡ ಇತರ ಭಾಷೆಯ ಪದಗಳನ್ನು ಕನ್ನಡಿಕರಿಸಿಕೊಂಡು ಬೆಳೆದಿದೆ. ಮುಂದೆಯೂ ಬೆಳೆಯಲಿದೆ. ಬದುಕು ರೂಪಿಸಿಕೊಳ್ಳುವಲ್ಲಿ ಅಕ್ಷರ ಜ್ಞಾನದ ಪಾತ್ರ ಮಹತ್ವದ್ದಾಗಿದೆ. ಕೈದಿಗಳು ಕೀಳರಿಮೆ ಬಿಟ್ಟು ಶಿಕ್ಷಣ ಪಡೆಯಬೇಕು’ ಎಂದರು.

ತಹಶಿಲ್ದಾರ್ ಶಶಿಧರ ಮಾಡ್ಯಾಳ ಮಾತನಾಡಿ, ‘ಜೀವನಕ್ಕೆ ಬೇಕಾದ ಸಂಸ್ಕಾರವನ್ನು ಶಿಕ್ಷಣ ನೀಡುತ್ತದೆ. ವಿದ್ಯೆಯೊಂದೇ ಮನುಷ್ಯನನ್ನು ಸದಾ ಕಾಯುವ ಅಸ್ತ್ರ’ ಎಂದು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ‘ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಅಕ್ಷರ ಜ್ಞಾನ ಕಲಿಸುವ ಸಾಕ್ಷರತೆ ಯೋಜನೆ ಇದಾಗಿದೆ. ನಿವೃತ್ತ ಶಿಕ್ಷಕರು ಸೇರಿದಂತೆ ಇತರ ಸಂಪನ್ಮೂಲ ವ್ಯಕ್ತಿಗಳಿಂದ ಸಾಕ್ಷರತೆ ತರಬೇತಿ ನೀಡಲಾಗುತ್ತದೆ’ ಎಂದರು.

ಎಸ್.ಆರ್. ರಾಚಣ್ಣವರ ಕಲಿಕಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಜಾನಪದ ವಿದ್ವಾಂಸ ರಾಮು ಮೂಲಗಿ ಕನ್ನಡ ಹಾಡುಗಳನ್ನು ಹಾಡಿದರು. ಉಪ ಕಾರಾಗೃಹದ ಅಧೀಕ್ಷಕ ಅಶೋಕ ಭಜಂತ್ರಿ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಅರುಣಕುಮಾರ ಸಾಳುಂಕೆ ಇದ್ದರು.

ಲೋಕ ಶಿಕ್ಷಣ ನಿರ್ದೇಶನಾಲಯ, ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹುಬ್ಬಳ್ಳಿ ಉಪ ಕಾರಾಗೃಹ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.